ಬೆಂಗಳೂರು: ಇಂದು ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 10 ಮಂದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಕೇವಲ 8 ಶಾಸಕರು ಮಾತ್ರ ಪ್ರಮಾಣವಚನ ಸ್ವೀಕರಿಸುವರು. ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರಾಗಿ ಎಂ.ಬಿ. ಪಾಟೀಲ್, ಡಾ.ಜಿ. ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಸತೀಶ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವರು.
ದೆಹಲಿಯಲ್ಲಿ ತಡರಾತ್ರಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರೊಂದಿಗೆ ಸುಮಾರು 5 ಗಂಟೆಗಳ ಚರ್ಚೆ ನಡೆಸಿ ತಡರಾತ್ರಿ ಸಿಎಂ, ಡಿಸಿಎಂ ಸೇರಿ 10 ಶಾಸಕರು ಪ್ರಮಾಣ ವಚನ ಸ್ವೀಕರಿಸಲು ತೀರ್ಮಾನಿಸಲಾಗಿದೆ.