ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಅವರು ರಾಜೀನಾಮೆ ನೀಡುವ ಪ್ರಶ್ನೆಯೂ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಗೃಹ ಸಚಿವ ಪರಮೇಶ್ವರ್, ವಿಚಾರಣೆ ವೇಳೆ ಇದರಲ್ಲಿ ಸಿಎಂ ಪಾತ್ರ ಏನು? ಎಂದು ನ್ಯಾಯಾಧೀಶರೇ ಕೇಳಿದ್ದಾರೆ. ಮುಡಾದಲ್ಲಿ ಸಿಎಂ ಪಾತ್ರ ಇಲ್ಲ. ನಾವು ಈ ನಿಟ್ಟಿನಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದರು.
ಸಿಎಂ ಸಿದ್ದರಾಮಯ್ಯ ವಿರುದ್ಧ 40-45 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ಆಪಾದನೆಗಳಿಲ್ಲ. ಈಗ ಆರೋಪ ಮಾಡುತ್ತಿರುವುದು ರಾಜಕೀಯ ಪ್ರೇರಿತ ಎಂದು ಹೇಳಿದರು. ಹೈಕೋರ್ಟ್ ಆದೇಶ ನಮಗೆ ಸಮಾಧಾನ ತಂದಿಲ್ಲ. ಕೋರ್ಟ್ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯ ವೀಕ್ ಆಗಿಲ್ಲ. ಅವರು ಗಟ್ಟಿಯಾಗಿಯೇ ಇದ್ದಾರೆ. ಮುಂದೆ ಕೋರ್ಟ್ ನಲ್ಲಿ ಹೋರಾಟ ಮುಂದುವರೆಸುತ್ತೇವೆ. ಡಬಲ್ ಬೆಂಚ್ ನಲ್ಲಿ ಈ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ಹೇಳಿದರು.