alex Certify BIG NEWS: ಮಾಜಿ ಸಚಿವ ಡಾ.ಕೆ.ಸುಧಾಕರ್ ಜೈಲಿಗೆ ಹೊಗುವುದು ಗ್ಯಾರಂಟಿ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಚಿವ ಡಾ.ಕೆ.ಸುಧಾಕರ್ ಜೈಲಿಗೆ ಹೊಗುವುದು ಗ್ಯಾರಂಟಿ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ರಾಜಕೀಯ ನಾಯಕರ ಅಬ್ಬರದ ಪ್ರಚಾರ ಜೋರಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಚುನಾವಣಾ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಚಿವ ಡಾ.ಸುಧಾಕರ್ ಜೈಲಿಗೆ ಹೋಗುವುದು ಗ್ಯಾರಂಟಿ ಎಂದು ಹೇಳಿದ್ದಾರೆ. ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ರಾಜ್ಯದಲ್ಲಿ ಬಹಳಷ್ಟು ಭ್ರಷ್ಟಾಚಾರ ನಡೆದಿದೆ. . ಭ್ರಷ್ಟರು ಸಂಸತ್ ಗೆ ಹೋದರೆ ಭ್ರಷ್ಟಾಚರ ಮತ್ತಷ್ಟು ಹೆಚ್ಚುತ್ತದೆ. ಸುಧಾಕರ್ ವಿರುದ್ಧ ತನಿಖೆಗೆ ಈಗಾಗಲೇ ಆಯೋಗ ರಚನೆ ಮಾಡಿದ್ದೇವೆ ಎಂದರು.

ಮಾಹಿತಿ ಪ್ರಕಾರ ಎಲ್ಲಾ ದಾಖಲೆಗಳು ಸುಧಾಕರ್ ಅವರ ವಿರುದ್ಧವೇ ಇದೆ. ಹಾಗಾಗಿ ಸುಧಾಕರ್ ನೂರಕ್ಕೆ ನೂರರಷ್ಟು ಜೈಲಿಗೆ ಹೋಗುತ್ತಾರೆ ಎಂದು ಹೇಳಿದರು.

ಬಿಜೆಪಿಯಲ್ಲಿ ಮಂತ್ರಿಯಾಗಿದ್ದಾಗ ಹಣ ಲೂಟಿ ಮಾಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಜನ ಸೋಲಿಸಿದ್ದೀರಿ. ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಲಾಭಿ ನಡೆಸಿ ಟಿಕೆಟ್ ಪಡೆದಿದ್ದಾರೆ. ನಾವು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ಮಾತು ಕೊಟ್ಟಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಹಾಗಾಗಿ ಈಬಾರಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯನನ್ನು ಗೆಲ್ಲಿಸುವಂತೆ ಕರೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...