alex Certify ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಲಿಂಗಾಯತ ಮುಖ್ಯಮಂತ್ರಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯನವರ ವಿರುದ್ಧ ದೂರು ನೀಡಲಾಗಿದೆ.

ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕದಿಂದ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಲಾಗಿದೆ. ಸಿದ್ದರಾಮಯ್ಯನವರು ಇಡೀ ಲಿಂಗಾಯಿತ ಸಮುದಾಯವನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರ ವಿರುದ್ಧ ಕ್ರಮಕ್ಕೆ ಮನವಿ ಮಾಡಲಾಗಿದೆ.

ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ ನಂತರ ಮಾತನಾಡಿದ ಲಿಂಗಾಯತ ಯುವ ವೇದಿಕೆ ಮುಖಂಡ ಬಸವರಾಜ್, ಲಿಂಗಾಯಿತ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಹೇಳಿಕೆ ನೀಡಿದ್ದು ಸರಿಯಲ್ಲ. ನಾವು ಯಾವುದೇ ಪಕ್ಷದ ಪರವಾಗಿ ಆಯೋಗಕ್ಕೆ ದೂರು ನೀಡಿಲ್ಲ. ಇಡೀ ಲಿಂಗಾಯತ ಸಮುದಾಯವನ್ನು ತೇಜೋವಧೆ ಮಾಡಿದ್ದಾರೆ. ಕೂಡಲೇ ಸಿದ್ದರಾಮಯ್ಯನವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...