
ಬೀದರ್: ರಾಜ್ಯದಲ್ಲಿ ಲಾಕ್ಡೌನ್ ಮಾಡುವುದಾದರೆ ಒಂದು ಕೋಟಿ ಬಡ ಕುಟುಂಬದವರ ಖಾತೆಗೆ ತಲಾ 10 ಸಾವಿರ ರೂಪಾಯಿ ಜಮಾ ಮಾಡಿ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಲಾಕ್ಡೌನ್ ಮಾಡುವುದರಿಂದ ಕೂಲಿಕಾರ್ಮಿಕರು, ಬಡವರಿಗೆ ಸಮಸ್ಯೆ ಎದುರಾಗುತ್ತದೆ. ಅವರಿಗೆ ತೊಂದರೆ ನೀಡಿ ಲಾಕ್ಡೌನ್ ಮಾಡುವುದು ಸರಿಯಲ್ಲ. ಬೇಕಾದರೆ ಸರ್ಕಾರದಿಂದ ಬಿಗಿಯಾದ ಕ್ರಮ ಕೈಗೊಳ್ಳಲಿ ಎಂದು ಸಲಹೆ ನೀಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ವಪಕ್ಷ ಸಭೆಯಲ್ಲಿ ಸಲಹೆ ನೀಡಲಾಗುವುದು. ಲಾಕ್ಡೌನ್ ಮಾಡುವುದಾದರೆ ರಾಜ್ಯದ ಒಂದು ಕೋಟಿ ಬಡ ಕುಟುಂಬದವರ ಖಾತೆಗೆ ತಲಾ 10 ಸಾವಿರ ರೂಪಾಯಿ ಜಮಾ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.