alex Certify ಅಂದು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಇಂದು ಕಸದ ರಾಶಿಯಲ್ಲಿ ಪತ್ತೆ; ಸಿಡಿದೆದ್ದ ರೈತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂದು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಇಂದು ಕಸದ ರಾಶಿಯಲ್ಲಿ ಪತ್ತೆ; ಸಿಡಿದೆದ್ದ ರೈತರು

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು, ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ರೈತರು, ಸಾರ್ವಜನಿಕರು, ರೈತ ಮುಖಂಡರು, ಆಕ್ಸಿಜನ್ ದುರಂತ ಸಂತ್ರಸ್ತರು ವಿವಿಧ ಬೇಡಿಕೆ ಈಡೇರಿಸುವಂತೆ, ಸಮಸ್ಯೆಗಳನ್ನು ಬಗೆಹರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು.

ಅಂದು ರೈತರು, ಸಾರ್ವಜನಿಕರಿಂದ ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಇಂದು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮನವಿ ಪತ್ರಗಳ ರಾಶಿಯೇ ಕಸದಲ್ಲಿ ಬಿದ್ದಿವೆ.

ಅಂದು ಗಂಟೆಗಟ್ಟಲೇ ಕಾದು ಸಾರ್ವಜನಿಕರು, ರೈತರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರು. ಆದರೆ ಇಂದು ಆ ಎಲ್ಲಾ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು, ಇದರಿಂದ ಸಿಡಿದೆದ್ದಿರುವ ರೈತರು, ಸಾರ್ವಜನಿಕರು ತಕ್ಷಣ ಸಿಎಂ ಸಿದ್ದರಾಮಯ್ಯ ಕ್ಷಮೆ ಕೋರಬೇಕು. ಇಲ್ಲವಾದಲ್ಲಿ ಸಿಎಂ ಜಿಲ್ಲೆಗೆ ಬಂದಾಗ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...