
ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ 16,155, ಕಂದಾಯ ಇಲಾಖೆಯ 13,632 ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 1.37 ಲಕ್ಷಕ್ಕೂ ಹೆಚ್ಚು ಕಡತಗಳು ವಿಲೇವಾರಿಗೆ ಬಾಕಿ ಇದ್ದು, ತಕ್ಷಣ ವಿಲೇವಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ನೇರ ಉಸ್ತುವಾರಿಯಲ್ಲಿ ಇರುವ ಹಣಕಾಸು ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ 1.37 ಲಕ್ಷಕ್ಕೂ ಹೆಚ್ಚು ಕಡತಗಳು ಬಾಕಿ ಇರುವುದು ಸಿಎಂ ಗಮನಕ್ಕೆ ಬಂದಿದ್ದು ತೀವ್ರ ಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಇಲಾಖೆಯ 9990, ಆಡಳಿತ ಸುಧಾರಣೆ ಇಲಾಖೆಯ 8267, ಗೃಹ ಇಲಾಖೆಯ 7976 ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 7297, ಲೋಕೋಪಯೋಗಿ ಇಲಾಖೆಯ 7173 ಕಡತಗಳು ಬಾಕಿ ಇವೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕಡತ ವಿಲೇವಾರಿ ಆಗದ ಬಗ್ಗೆ ಕೆಲವು ಶಾಸಕರಿಂದ ಆಕ್ಷೇಪ ವ್ಯಕ್ತವಾಗಿದೆ. ಬಾಕಿ ಕಳಡಗಳ ವಿಲೇವಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಫೆಬ್ರವರಿ 1ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಡತಗಳು ಬಾಕಿ ಇರುವುದು ಗೊತ್ತಾಗುತ್ತಿದ್ದಂತೆ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ತಕ್ಷಣ ಕಡತಗಳ ವಿಲೇವಾರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.