BIG BREAKING: ರಾಹುಲ್ ಗಾಂಧಿ ಬೆಂಬಲ: ಸಿಎಂ ರೇಸ್ ನಲ್ಲಿ ಡಿಕೆಶಿ ಹಿಂದಿಕ್ಕಿದ ಸಿದ್ಧರಾಮಯ್ಯ…?

ನವದೆಹಲಿ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಬೆಂಬಲ ಸಿಕ್ಕಿದ್ದು, ಕರ್ನಾಟಕ ಸಿಎಂ ಸ್ಥಾನದ ರೇಸ್‌ ನಲ್ಲಿ ಶಿವಕುಮಾರ್ ಅವರನ್ನು ಹಿಂದಿಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಮುಖ್ಯಮಂತ್ರಿ ಸ್ಥಾನದ ತೀವ್ರ ಪೈಪೋಟಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬೆಂಬಲವನ್ನು ಪಡೆದ ನಂತರ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್‌ ಗಿಂತ ಸಿಎಂ ಸ್ಥಾನಕ್ಕೆ ಹತ್ತಿರವಾಗಿದ್ದಾರೆ. ಆದರೆ, ಮುಖ್ಯಮಂತ್ರಿ ವಿಚಾರದಲ್ಲಿ ಕಾಂಗ್ರೆಸ್ ಉನ್ನತ ನಾಯಕತ್ವ ಇನ್ನೂ ಭಿನ್ನಾಭಿಪ್ರಾಯ ಹೊಂದಿದೆ ಎನ್ನಲಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತಿದ್ದಾರೆ. ಬಹುತೇಕ ಶಾಸಕರು ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಸಿಎಂ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಪರವಾಗಿದ್ದಾರೆ. ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರು ತಟಸ್ಥರಾಗಿದ್ದಾರೆ ಎನ್ನಲಾಗಿದೆ.

. ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಇಬ್ಬರಲ್ಲಿ ಯಾರನ್ನಾದರೂ ಆಯ್ಕೆ ಮಾಡುವ ಜವಾಬ್ದಾರಿಯನ್ನು ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read