ಮಂಡ್ಯ: ಸಿಎಂ ಬೊಮ್ಮಾಯಿ ಸರ್ಕಾರ ಹೆಚ್ಚು ದಿನ ಉಳಿಯುವುದು ಅನುಮಾನ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟಾಂಪ್ ಅವರ ನೇತೃತ್ವದ ಸರ್ಕಾರದ ಕುರಿತಾಗಿ ಇನ್ನು ಮೂರು ತಿಂಗಳು ಮಾತನಾಡುವುದಿಲ್ಲ ಎಂದು ಈ ಹಿಂದೆ ಹೇಳಿದ್ದ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಶಿವಪುರದಲ್ಲಿ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಎಷ್ಟು ದಿನ ಇರುತ್ತದೆ ಎಂದು ನಾನೇನು ಜ್ಯೋತಿಷ್ಯ ಹೇಳುವುದಿಲ್ಲ. ಅವರಾಗಿಯೇ ಬೀಳಬಹುದು, ನಾವಂತೂ ಬೀಳಿಸುವುದಿಲ್ಲ. ಸರ್ಕಾರ ಬೀಳಿಸುವ ಪ್ರಯತ್ನ ಮಾಡುವುದಿಲ್ಲ. ಬಿಜೆಪಿ ಸರ್ಕಾರ ಪೂರ್ಣಾವಧಿ ಇರುತ್ತದೆಯೇ ಇಲ್ಲವೇ ಎನ್ನುವುದು ನನಗೆ ಗೊತ್ತಿಲ್ಲ. ಕಾದು ನೋಡೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.