alex Certify BIG NEWS: ಬಿಜೆಪಿ ಪರ ಮಾಜಿ ಸಿಎಂ HDK ವಕಾಲತ್ತು; ಸದನದಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಪರ ಮಾಜಿ ಸಿಎಂ HDK ವಕಾಲತ್ತು; ಸದನದಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಸಿಎಂ ಉತ್ತರದ ವೇಳೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯಿತು. ರಾಜ್ಯದ ಪರವಾಗಿ, ರಾಜ್ಯದ ಜನರ ಪರವಾಗಿ ನಿಲ್ಲುವುದನ್ನು ಬಿಟ್ಟು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಪರ ವಕಾಲತ್ತು ವಹಿಸಿ ಕೇಂದ್ರಕ್ಕೆ ಪತ್ರ ಬರೆದಿರುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು.

ಹೆಚ್.ಡಿ.ಕುಮಾರಸ್ವಾಮಿ ಸದನದಲ್ಲಿ ಬಿಜೆಪಿ ಪರ ವಕಾಲತ್ತು ವಹಿಸುತ್ತಿದ್ದಾರೆ. ರಾಜ್ಯದ ಪರವಾಗಿ, ರಾಜ್ಯದ ಜನರ ಪರವಾಗಿ ತಾವು ವಕಾಲತ್ತು ವಹಿಸಿ ಕೇಂದ್ರಕ್ಕೆ ಪತ್ರ ಬರೆಯಿರಿ. ರಾಜ್ಯದ ಜನರ ಪರವಾಗಿ, ನಮ್ಮ ಹಕ್ಕನ್ನು ನಾವು ಕೇಳುತ್ತಿದ್ದೇವೆ ತಪ್ಪೇನು? ಎಂದು ಪ್ರಶ್ನಿಸಿದರು.

ಹೆಚ್.ಡಿ.ಕುಮಾರಸ್ವಾಮಿಯವರು ಕೇಂದ್ರದ ಜತೆ ಸಂಘರ್ಷಕ್ಕೆ ಇಳಿಯಬಾರದು ಎಂದಿದ್ದಾರೆ. ಆದರೆ ನಾವು ಸಂಘರ್ಷಕ್ಕೆ ಇಳಿದಿಲ್ಲ. ರಾಜ್ಯದ ಪಾಲಿನ‌ ಸಂವಿಧಾನಬದ್ದ ಹಕ್ಕನ್ನು, ಅನುದಾನವನ್ನು ಕೇಳುವುದು ಸಂಘರ್ಷ ಆಗುವುದಿಲ್ಲ. ರಾಜ್ಯದಲ್ಲಿ ತೀವ್ರ ಬರಗಾಲ ಇದೆ. ಕೇಂದ್ರದಿಂದ ಬರ ಪರಿಹಾರ ಕೇಳಿ 17 ಬಾರಿ ಕೇಂದ್ರಕ್ಕೆ ಬರೆದೆವು‌. ಇದರಲ್ಲಿ ಒಂದು ಪತ್ರಕ್ಕೆ ಮಾತ್ರ, ’ನಿಮ್ಮ ಪತ್ರ ತಲುಪಿದೆ’ ಎನ್ನುವ ಉತ್ತರ ಕೇಂದ್ರದಿಂದ ಬಂತು. ಆದರೆ ಉಳಿದ 16 ಪತ್ರಗಳಿಗೆ ಉತ್ತರವೂ ಬರಲಿಲ. ಕೇಂದ್ರದ ಅನುದಾನ ರಾಜ್ಯಕ್ಕೆ ಇವತ್ತಿನವರೆಗೂ ಒಂದು ಪೈಸೆಯೂ ಬಂದಿಲ್ಲ. ಇದು ನಿಯಮಬದ್ದವಾಗಿ ರಾಜ್ಯದ ಹಕ್ಕು. ರಾಜ್ಯದ ಪಾಲು. ಇದನ್ನೂ ಕೇಂದ್ರ ಕೊಡುತ್ತಿಲ್ಲ. ನಮ್ಮ ಪಾಲನ್ನು, ರಾಜ್ಯದ ಪಾಲನ್ನು ಕೇಳುವುದು ತಪ್ಪಾ? ಇದರಲ್ಲಿ ಸಂಘರ್ಷ ಹೇಗಾಗುತ್ತದೆ ಎಂದು ಪ್ರಶ್ನೆಸಿದರು.

ರಾಜ್ಯಕ್ಕೆ ಬರಗಾಲ ಬಂದಾಗ ನರೇಗ ಮಾನವ ದಿನಗಳನ್ನು ನಿಯಮ ಬದ್ದವಾಗಿ 100 ರಿಂದ 150 ದಿನಗಳಿಗೆ ಏರಿಕೆ ಮಾಡಬೇಕಿತ್ತು. ಇದಕ್ಕಾಗಿ ಹಲವು ಬಾರಿ ಮನವಿ ಮಾಡಿದರೂ ಮಾನವ ದಿನಗಳನ್ನು ಏರಿಕೆ ಮಾಡಿಲ್ಲ. ಇದು ರಾಜ್ಯದ ಜನರಿಗೆ ಮಾಡಿದ ಅನ್ಯಾಯ ಅಲ್ಲವೇ? ಎಂದು ಪ್ರಶ್ನಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...