ಬೆಂಗಳೂರು: ಐಎಎಸ್ ಅಧಿಕಾರಿಗಳನ್ನು ಗುಲಾಮರಂತೆ ನಡೆಸಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕರನ್ನು ಸ್ವಾಗತಿಸಲು ಹಿರಿಯ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ. ಇದನ್ನು ಪ್ರಶ್ನಿಸಿದ ಬಿಜೆಪಿ, ಜೆಡಿಎಸ್ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸಿದೆ. ನಮ್ಮದು ತಪ್ಪಾಗಿದೆ. ಇನ್ನು ಮುಂದೆ ಮಾಡುವುದಿಲ್ಲ ಎಂದಿದ್ದರೆ ಆಗುತ್ತಿತ್ತು. ಆದರೆ, ಆಡಳಿತಾರೂಢ ಕಾಂಗ್ರೆಸ್ ನವರಿಗೆ ಇದು ಪ್ರತಿಷ್ಠೆಯಾಗಿದೆ ಎಂದು ಟೀಕಿಸಿದ್ದಾರೆ.
ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನಾನು ಬೇರೆ ರಾಜ್ಯಗಳ ಮುಖ್ಯಮಂತ್ರಿಗಳ ಸ್ವಾಗತಕ್ಕೆ ಅಧಿಕಾರಿಗಳನ್ನು ನೇಮಿಸಿರಲಿಲ್ಲ. ಜೆಡಿಎಸ್ ನಾಯಕರಾಗಿದ್ದ ಡ್ಯಾನಿಶ್ ಅಲಿ ಸ್ವಾಗತಕ್ಕೆ ಅಧಿಕಾರಿಗಳನ್ನು ನೇಮಿಸಿರಲಿಲ್ಲ. ಅಧಿಕಾರಿ ಓ.ಎಸ್. ಪಾಟೀಲ್ ಅವರನ್ನು ನಾನು ನೇಮಕ ಮಾಡಿರಲಿಲ್ಲ. ಆದರೆ, ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ತಮಗೆ ವಿಶೇಷ ಕ್ಯಾಬಿನ್, ಅಧಿಕಾರಿ ಬೇಕು ಎಂದು ಹೇಳಿದ್ದರು. ಸರ್ಕಾರದಲ್ಲಿ ಯಾವುದೇ ಸ್ಥಾನಮಾನ ಇಲ್ಲದಿದ್ದರೂ ಸವಲತ್ತು ಪಡೆದಿದ್ದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.