ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಹಾನಿ ಹಿನ್ನೆಲೆಯಲ್ಲಿ ಜುಲೈ 26ರಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ. ಮಳೆ ಹಾನಿ, ಬೆಳೆ ಪರಿಸ್ಥಿತಿಯ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ.
ರಾಜ್ಯದ ಕರಾವಳಿ, ಮಲೆನಾಡು ಸೇರಿ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಕಾರಣ ರಸ್ತೆ, ಸೇತುವೆ, ಬೆಳೆ, ಜೀವಹಾನಿ ಆಗಿದ್ದು, ಸಿಎಂ ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸೂಚನೆ ನೀಡಲಿದ್ದಾರೆ.