ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರದಿಂದ ಗೊಂದಲ ಸೃಷ್ಟಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ಬಗ್ಗೆ ಕೋರ್ಟ್ ಗೆ ಹೋದರೆ ತಡೆಯಾಜ್ಞೆ ಸಿಗುವಂತೆ ಮಾಡಿ ಬಿಜೆಪಿ ವಂಚಿಸಿದೆ ಎಂದು ಟೀಕಿಸಿದ್ದಾರೆ.
ತಾಂಡಾ, ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಾವು ಎಂದು ಹೇಳಿದ ಸಿದ್ದರಾಮಯ್ಯ 2018ರಲ್ಲಿ ಕಾಂಗ್ರೆಸ್ ಸರ್ಕಾರ ತಾಂಡಾ ಮತ್ತು ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು, ಈಗ ಪ್ರಧಾನಿ ಮೋದಿ ಬಂದು ಹಕ್ಕುಪತ್ರ ನೀಡಿ ರಾಜಕೀಯ ಲಾಭ ಪಡೆದುಕೊಂಡಿದ್ದಾರೆ. ದೇಶದಲ್ಲಿ ಮೋದಿ ಅವರಂತೆ ಸುಳ್ಳು ಹೇಳುವವರು ಯಾರು ಇಲ್ಲ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾವು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ 20 ಲಕ್ಷ ಮನೆ ನಿರ್ಮಾಣ ಮಾಡುತ್ತೇವೆ. ಬಡವರು ಅರ್ಜಿ ಸಲ್ಲಿಸಿದ ಕೂಡಲೇ ಮನೆ ಮಂಜೂರು ಮಾಡುತ್ತೇವೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.