alex Certify ಒಳಸಂಚಿನ ಶಾಲೆಗೆ ಹೆಚ್.ಡಿ. ಕುಮಾರಸ್ವಾಮಿ ಪ್ರಿನ್ಸಿಪಾಲ್: ಕೆ.ಎನ್. ರಾಜಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಳಸಂಚಿನ ಶಾಲೆಗೆ ಹೆಚ್.ಡಿ. ಕುಮಾರಸ್ವಾಮಿ ಪ್ರಿನ್ಸಿಪಾಲ್: ಕೆ.ಎನ್. ರಾಜಣ್ಣ

ವಚನ ಭ್ರಷ್ಟತೆ, ಒಳಸಂಚು ಹೆಚ್.ಡಿ. ಕುಮಾರಸ್ವಾಮಿ ಕಾಲದಲ್ಲಿ ಆರಂಭವಾಯಿತು. ಅಂತಹ ವಚನ ಭ್ರಷ್ಟತೆ ಶಾಲೆ ಪ್ರಿನ್ಸಿಪಾಲ್ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯನವರನ್ನು ಟೀಕಿಸುತ್ತಾರೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಕಿಡಿಕಾರಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅಧಿಕಾರ ಹಸ್ತಾಂತರ ಮಾಡದೇ 20 ತಿಂಗಳಲ್ಲಿ ನಮ್ಮ ಎಲ್ಲರ ಶಾಸಕ ಸ್ಥಾನ ಕಸಿದುಕೊಂಡರು. ಇಂತಹವರು ಸಿದ್ದರಾಮಯ್ಯನವರ ಬಗ್ಗೆ ಮಾತನಾಡುತ್ತಾರೆ ಎಂದು ದೂರಿದ್ದಾರೆ.

ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಆಸ್ತಿ. ಬೇರೆ ಪಕ್ಷಗಳಿಂದ ಕಾಂಗ್ರೆಸ್ ಗೆ ಹಲವರು ಬರುತ್ತಾರೆ. ಎಸ್.ಆರ್. ಶ್ರೀನಿವಾಸ್ ನಮ್ಮವರು ಎಂದು ರಾಜಣ್ಣ ಹೇಳಿದ್ದಾರೆ.

ಸಿದ್ಧರಾಮಯ್ಯ ಅವರ ಕುರಿತಾಗಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ಖಂಡಿಸಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013 ರಲ್ಲಿ ಕೊರಟಗೆರೆಯಲ್ಲಿ ಪರಮೇಶ್ವರ್ ಸೋಲಿಗೆ ಏನು ಕಾರಣವೆಂದು ನನಗೆ ಗೊತ್ತಿಲ್ಲ. ಆದರೆ ಹಾಲಿ ಶಾಸಕರ ಕೆಲಸದ ಮೇಲೆ ಗೆಲುವು ನಿಂತಿರುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...