alex Certify BUDGET BREAKING: ರಾಜ್ಯ ಸರ್ಕಾರದ ಬಜೆಟ್ ನಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ಘೋಷಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BUDGET BREAKING: ರಾಜ್ಯ ಸರ್ಕಾರದ ಬಜೆಟ್ ನಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ಘೋಷಣೆ.!

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವಾರು ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಯಲ್ಲಿ ತಿಳಿಸಿದ್ದಾರೆ.

i) 177 ಕೋಟಿ ರೂ. ಮೊತ್ತದಲ್ಲಿ 114 Modular Operation Theater ಗಳನ್ನು, 34 ಕೋಟಿ ರೂ. ವೆಚ್ಚದಲ್ಲಿ 64 Anaesthesia Work Station ಗಳನ್ನು ಸ್ಥಾಪಿಸಲಾಗಿದೆ.
ii) ಗದಗ ಮೆಡಿಕಲ್‌ ಕಾಲೇಜಿನಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಅನ್ನು
10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ.
iii) ಕಲಬುರಗಿಯಲ್ಲಿ 92 ಕೋಟಿ ರೂ. ವೆಚ್ಚದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಹಾಗೂ 304 ಕೋಟಿ ರೂ. ವೆಚ್ಚದ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ.
iv) 26 ಕೋಟಿ ರೂ. ವೆಚ್ಚದ ಬೆಂಗಳೂರಿನ
ನೆಫ್ರೊ-ಯುರಾಲಾಜಿ ಸಂಸ್ಥೆಯ ಕಟ್ಟಡವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುವುದು.

ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ವೈದ್ಯಕೀಯ ಕಾಲೇಜನ್ನು ಹಾಗೂ ಕೋಲಾರದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜನ್ನು ಆರಂಭಿಸಲು ಉದ್ದೇಶಿಸಲಾಗಿದೆ.

ಬೀದರ್‌ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಪತ್ತೆ ವಿಭಾಗವನ್ನು ಆರಂಭಿಸಲಾಗುವುದು.

ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು.

2025-26ನೇ ಸಾಲಿನಲ್ಲಿ ಸಾರ್ವಜನಿಕರಿಗೆ ಸುಧಾರಿತ
ಆರೋಗ್ಯ ಸೇವೆಯನ್ನು ಒದಗಿಸಲು ಈ ಕೆಳಕಂಡಂತೆ
ಹೊಸ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
i) ರಾಜ್ಯದ 22 ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯ ಮತ್ತು ಮಾನವ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಅಲೈಡ್‌ ಹೆಲ್ತ್‌ ಸೈನ್ಸ್‌ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು.
ii) ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
iii) ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ (Endocrinology) ಕೇಂದ್ರಗಳನ್ನು ಆರಂಭಿಸಲಾಗುವುದು.
iv) ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ಮಾದರಿಯ ಸಂಸ್ಥೆಗಳನ್ನು ತಲಾ 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
v) ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು.
vi) ರಾಯಚೂರಿನ ರಾಜೀವ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫರೆಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪಿಸಲಾಗುವುದು.
vii) ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿಯಲ್ಲಿ ತಲಾ ಆರು ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನರ್ಸಿಂಗ್‌ ಕಾಲೇಜುಗಳನ್ನು KKRDB ಅನುದಾನದಲ್ಲಿ ಆರಂಭಿಸಲಾಗುವುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ರಾಷ್ಟ್ರವು ತನ್ನ ಅರ್ಧದಷ್ಟಿರುವ ಮಹಿಳೆಯರನ್ನು ಆರ್ಥಿಕವಾಗಿ ನಿಷ್ಕ್ರಿಯವಾಗಿಸಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಅವರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿಸದೆ ಮಾಡುವ ಎಲ್ಲಾ ಅಭಿವೃದ್ಧಿ ಮಾದರಿಗಳು ಟೊಳ್ಳಾಗಿರುತ್ತವೆ.
– ಡಾ|| ಬಿ. ಆರ್‌. ಅಂಬೇಡ್ಕರ್‌

ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಧನಸಹಾಯ ಒದಗಿಸಲಾಗಿತ್ತು. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28,608 ಕೋಟಿ ರೂ. ಒದಗಿಸಲಾಗಿದೆ.

ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗುವುದು.

ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ಒಂದು ಲಕ್ಷ ರೂ. ನಂತೆ ಒಟ್ಟು 175 ಕೋಟಿ ರೂ. ಒದಗಿಸಲಾಗುವುದು.

ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ನಗರಸಭೆ/ ಪುರಸಭೆಗಳಲ್ಲಿ ಲಭ್ಯವಿರುವ 173 ಸಿ.ಎ ನಿವೇಶನಗಳನ್ನು ನಗರಾಭಿವೃದ್ಧಿ ಇಲಾಖೆಯಿಂದ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಖರೀದಿಸಲು 10 ಕೋಟಿ ರೂ. ಮೀಸಲಿರಿಸಲಾಗಿದೆ.

ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ಹಾಗೂ ಅವರಿಗೆ ಸೂಕ್ತ ಸೌಲಭ್ಯ ಒದಗಿಸುವ ಹಿತದೃಷ್ಟಿಯಿಂದ ವಿಕಲಚೇತನರ ಸಮೀಕ್ಷೆ ನಡೆಸಲಾಗುವುದು.

ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು.

Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ನೀಡುತ್ತಿರುವ ಮಾಸಿಕ 1,000 ರೂ. ಪ್ರೋತ್ಸಾಹಧನ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗುವುದು.

ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಲಾಗುವುದು

ವಿಶೇಷ ಪಾಲನಾ ಯೋಜನೆಯಡಿ ಹೆಚ್‌.ಐ.ವಿ. ಸೋಂಕಿತ ಮತ್ತು ಬಾಧಿತ ಮಕ್ಕಳ ಪೌಷ್ಟಿಕ ಆಹಾರ ಮತ್ತು ಶಿಕ್ಷಣವನ್ನು ಪ್ರೋತ್ಸಾಹಿಸಲು ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಧನಸಹಾಯವನ್ನು 1,000 ರೂ.ನಿಂದ 2,000 ರೂ.ಗೆ ಹೆಚ್ಚಿಸಲಾಗುವುದು.

ರಾಜ್ಯ ಅನುದಾನದಡಿಯಲ್ಲಿ ನಡೆಯುತ್ತಿರುವ ವಸತಿಯುತ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆಯನ್ನು ಮಾಸಿಕ 1,750 ರೂ.ಗಳಿಗೆ ಹೆಚ್ಚಿಸಲಾಗುವುದು.

ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂ. ಒದಗಿಸಲಾಗುವುದು.

ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 62,033 ಕೋಟಿ ರೂ. ಒದಗಿಸಲಾಗುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...