ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿನೋವಿಂದ ಬಳಲುತಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಸಿಎಂ ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿಗೆ ಸೂಚಿಸಿದ್ದಾರೆ.
ಮಂಡಿ ನೋವು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಂಡಿಯ ಮೇಲೆ ಯಾವುದೇ ಭಾರ ಹಾಕದಂತೆ ನೋಡಿಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ವಿಶ್ರಾಂತಿ ಪಡೆಯುತ್ತಿದ್ದು, ಇಂದಿನ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.