ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಇಂದು ಜನರ ನಾಡಿಮಿಡಿತ ಅಡಿಯಲು ಕೋಲಾರ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯ, ನಾನು ನಾಮಪತ್ರ ಸಲ್ಲಿಸಲು ಮತ್ತೆ ಕೋಲಾರಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರ ಜನರ ನಾಡಿಮಿಡಿತ ಅರಿಯಲು ಸಿದ್ದರಾಮಯ್ಯ ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಕಾಂಗ್ರೆಸ್ ಜನ ಪ್ರತಿನಿಧಿಗಳು, ಮುಖಂಡರು ಸಿದ್ದರಾಮಯ್ಯ ಸ್ಪರ್ಧಿಸಿದರೆ ಗೆಲ್ಲಿಸುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೋಲಾರದಲ್ಲಿ ಚರ್ಚ್, ಮಸೀದಿ, ಮಂದಿರಗಳಿಗೆ ಭೇಟಿ ನೀಡಲಿದ್ದಾರೆ. ಕೋಲಾರದಲ್ಲಿ ಸ್ಪರ್ಧಿಸುವ ಕುರಿತಂತೆ ಮುಖಂಡರು, ಜನರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.