alex Certify ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಖಚಿತ…? ಜನರ ನಾಡಿಮಿಡಿತ ಅರಿಯಲು ಇಂದು ಕ್ಷೇತ್ರ ಪ್ರವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಖಚಿತ…? ಜನರ ನಾಡಿಮಿಡಿತ ಅರಿಯಲು ಇಂದು ಕ್ಷೇತ್ರ ಪ್ರವಾಸ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರ ಜನರ ನಾಡಿಮಿಡಿತ ಅರಿಯಲು ಸಿದ್ದರಾಮಯ್ಯ ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ.

ಕೋಲಾರ ಜಿಲ್ಲೆಯ ಕಾಂಗ್ರೆಸ್ ಜನ ಪ್ರತಿನಿಧಿಗಳು, ಮುಖಂಡರು ಸಿದ್ದರಾಮಯ್ಯ ಸ್ಪರ್ಧಿಸಿದರೆ ಗೆಲ್ಲಿಸುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ ಅವರ ಸ್ಪರ್ಧೆಗೆ ಸಹಮತ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೋಲಾರದಲ್ಲಿ ಚರ್ಚ್, ಮಸೀದಿ, ಮಂದಿರಗಳಿಗೆ ಭೇಟಿ ನೀಡಲಿದ್ದಾರೆ. ಕೋಲಾರದಲ್ಲಿ ಸ್ಪರ್ಧಿಸುವ ಕುರಿತಂತೆ ಮುಖಂಡರು, ಜನರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಬಾದಾಮಿ, ವರುಣಾ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತಾಗಿ ಸಿದ್ಧರಾಮಯ್ಯ ಚಿಂತನೆ ನಡೆಸಿದ್ದು, ಕೋಲಾರದಿಂದ ಸ್ಪರ್ಧಿಸಲು ಒತ್ತಡವಿರುವ ಹಿನ್ನಲೆಯಲ್ಲಿ ಇಂದು ಪ್ರವಾಸ ಕೈಗೊಂಡಿದ್ದು, ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...