![](https://kannadadunia.com/wp-content/uploads/2022/10/siddaramiah1655720161.jpg)
ಕೋಲಾರ: ನಾಳೆ ಕೋಲಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಹಿನ್ನೆಲೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಮಾರಂಭ ನಡೆಯುವ ಸ್ಥಳವನ್ನು ಮಾಜಿ ಸಚಿವ ರಮೇಶ್ ಕುಮಾರ್ ಪರಿಶೀಲಿಸಿದ್ದಾರೆ. ಕೋಲಾರದ ಕುರುಬರಪೇಟೆಯ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ವೇದಿಕೆ ನಿರ್ಮಾಣ ಮಾಡಿ ಪೆಂಡಾಲ್ ಹಾಕಲಾಗಿದೆ. ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ನಾಳಿನ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಅಧಿಕ ಜನರು ಭಾಗಿಯಾಗುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರಿಗೆ ಕೋಲಾರದ ಕಾಂಗ್ರೆಸ್ ಮುಖಂಡರು ಸಾಥ್ ನೀಡಲಿದ್ದಾರೆ. ನಾಳೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.