ಬೆಂಗಳೂರು: ಸಿಎಂ ಕುರ್ಚಿ ಕಾಳಗ, ಬದಲಾವಣೆ ಚರ್ಚೆ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ತ್ಯಾಗದ ಬಗ್ಗೆ ಮಾತನಾಡಿದ್ದು, ಗಮನ ಸೆಳೆದಿದೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರ ತ್ಯಾಗದ ಬಗ್ಗೆ ಪ್ರಸ್ತಾಪಿಸಿದರು. ನಾವೆಲರೂ ತ್ಯಾಗಕ್ಕೆ ಸಿದ್ಧರಾಗಬೇಕು ಎಂದರು.
ಕಾಂಗ್ರೆಸ್ ನ ಸಾಕಷ್ಟು ನಾಯಕರು ತ್ಯಾಗ ಮಾಡಿದ್ದಾರೆ. ಸೋನಿಯಾ ಗಾಂಧಿಯವರು ಅಧಿಕಾರವನ್ನೇ ತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಪಕ್ಷಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ನಾವು ಕೂಡ ಅದೇ ರೀತಿಯ ದಾರಿಯಲ್ಲಿ ನಡೆಯುವ ಯತ್ನ ಮಾಡಬೇಕು ಎಂದು ಹೇಳಿದರು. ಕಾಂಗ್ರೆಸ್ ನವರು ಮಾತ್ರ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ, ತ್ಯಾಗ ಮಾಡಿದ್ದಾರೆ. ಬೇರೆ ಯಾರಾದರೂ ಹೋರಾಟ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.
ಒಟ್ಟಾರೆ ಪಕ್ಷದ ಸರ್ವ ಸದಸ್ಯರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರ ತ್ಯಾಗದ ಕುರಿತ ಪಾಠ ಕುತೂಹಲ ಮೂಡಿಸಿದೆ.