ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯನ್ನು ಖಂಡಿಸಿ ಆಗಸ್ಟ್ 26 ರಂದು ಮಡಿಕೇರಿ ಚಲೋಗೆ ಕರೆ ನೀಡಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದಲೇ ಮಡಿಕೇರಿ ಚಲೋಗೆ ಕರೆ ನೀಡಲಾಗಿದ್ದು, ಆಗಸ್ಟ್ 26 ರಂದು ಬೆಳಗ್ಗೆ 10.30 ಕ್ಕೆ ಮಡಿಕೇರಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಎದುರು ಪ್ರತಿಭಟನೆ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು, ಸಂಸದರು, ರಾಜ್ಯಸಭೆ, ವಿಧಾನ ಪರಿಷತ್ ಸದಸ್ಯರಿಗೆ ಭಾಗಿಯಾಗಲು ಸೂಚನೆ ನೀಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಕಾರ್ಯದರ್ಶಿ ಈ. ತುಕಾರಾಂ ಅವರು ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಮಡಿಕೇರಿ ಚಲೋಗೆ ಕರೆ ನೀಡಲಾಗಿದೆ.