
ಬೆಂಗಳೂರು: ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅ. 16 ರ ಸಂಜೆಯೊಳಗೆ ಕಾಂಗ್ರೆಸ್ ಎಲ್ಲಾ ಶಾಸಕರು ಬೆಂಗಳೂರಿಗೆ ಬರಬೇಕು ಎಂದು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು, ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಮತದಾನ ಮಾಡಲು ಅ. 16 ರ ಸಂಜೆಯೊಳಗೆ ಎಲ್ಲಾ ಶಾಸಕರು ಬೆಂಗಳೂರಿಗೆ ಬರುವಂತೆ ತಿಳಿಸಿದ್ದಾರೆ.