
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಮುಡಾ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದೆ.
ಮುಡಾ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖಾ ವರದಿ ತಿರಸ್ಕರಿಸುವಂತೆ ಕೋರಿ ಇಡಿ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದೆ. ಒಟ್ಟು 8 ಪುಟಗಳ ತಕರಾರು ಅರ್ಜಿ ಯನ್ನು ಇಡಿ ಅಧಿಕಾರಿಗಳು ಸಲ್ಲಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿಗಳಿವೆ. ನಮ್ಮ ತನಿಖೆಯಲ್ಲಿ ಅವರ ತಪ್ಪುಗಳು ಸಾಬೀತಾಗಿವೆ. ಹೀಗಾಅಗಿ ಲೋಕಾಯುಕ್ತ ವರದಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದೆ ಎಂದು ತಿಳಿದುಬಂದಿದೆ.