alex Certify ಕಳೆದ 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದರೂ ಅವ್ಯವಸ್ಥೆಯಾಗಲು ಯಾಕೆ ಬಿಟ್ಟಿದ್ದೀರಿ? ಶಾಸಕರಿಗೆ ಸಿಎಂ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಳೆದ 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದರೂ ಅವ್ಯವಸ್ಥೆಯಾಗಲು ಯಾಕೆ ಬಿಟ್ಟಿದ್ದೀರಿ? ಶಾಸಕರಿಗೆ ಸಿಎಂ ಪ್ರಶ್ನೆ

ಬೆಂಗಳೂರು: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರುಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರಿನ‌ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಅಲ್ರೀ ಎಲ್ಲಾ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ. ನೀವುಗಳು ಸದಸ್ಯರಾಗಿದ್ದೂ ಯಾಕಿಂಗಾಯ್ತು? ಯಾಕೆ ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ ಎಂದು ಕೇಳಿದರು.

ಹೊಸ ಬಡಾವಣೆ ಮಾಡುವಾಗ ವಿದ್ಯುತ್‌ ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಇಂತಹ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವುದರಿಂದ ಸಮಸ್ಯೆ ಮುಂದುವರೆದಿದೆ ಎಂದು‌ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಬಳಿಕ ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಆಗದೆ ಕುಂಟುತ್ತಿರುವ ಬಗ್ಗೆ ಕೇಂದ್ರದ ಮತ್ತು ರಾಜ್ಯದ ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕೇಂದ್ರದ ಸಚಿವರಿಗೆ ವಿವರವಾದ ಪತ್ರ ಬರೆಯಲು ಮತ್ತು ಅನುಷ್ಠಾನ ಕುರಿತು ಕೇಂದ್ರ ವಿಮಾನಯಾನ ಸಚಿವರನ್ನು ಜ 15 ರಂದು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದರು.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲಾಭಿವೃದ್ಧಿ ಕುರಿತಾದ ಸಭೆಯ ಮುಖ್ಯಾಂಶಗಳು:

• ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ.ಯೋಜನೆಯಡಿ ಇನ್ನೂ 46 ಎಕ್ರೆ ಭೂಸ್ವಾಧೀನ ಆಗಬೇಕಿದೆ. ಈಗಾಗಲೇ 111 ಎಕ್ರೆ ಭೂಸ್ವಾಧೀನಕ್ಕೆ ಪಾವತಿ ಮಾಡಲಾಗಿದೆ. ಇನ್ನೂ 95 ಎಕ್ರೆ ಪಾವತಿ ಆಗಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

• ಶಿಥಿಲಗೊಂಡಿರುವ ಲಾನ್ಸ್‌ಡೌನ್‌ ಕಟ್ಟಡವನ್ನು ತೆರವುಗೊಳಿಸಿ ಅದೇ ಮಾದರಿಯಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತಾದ ಎಲ್ಲಾ ಕಾನೂನು ತೊಡಕುಗಳನ್ನು ಬಗೆಹರಿಸಬೇಕು.

• ಶಿಥಿಲ ಪರಿಸ್ಥಿತಿಯಲ್ಲಿರುವ ದೇವರಾಜ ಅರಸು ಮಾರುಕಟ್ಟೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು.

• ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಅಭಿವೃದ್ಧಿಪಡಿಸಲು ರೂ. 25 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಇದೇ ರೀತಿ ಕುಕ್ಕರಳ್ಳಿ ಕೆರೆ ಪುನಶ್ಚೇತನಕ್ಕೆ ಕ್ರಮ. ಇದಕ್ಕಾಗಿ ಕೆರೆ ಅಭಿವೃದ್ದಿ ಶುಲ್ಕ ಬಳಸಿಕೊಳ್ಳಲು ಸೂಚನೆ.

• ಮೈಸೂರು ನಗರ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಒಳಚರಂಡಿ ನಿರ್ಮಾಣ, ಕೊಳಚೆ ನೀರು ಸಂಸ್ಕರಣೆ ಯೋಜನೆ ಜಾರಿಗೆ ರೂ.670 ಕೋಟಿ ಡಿಪಿಆರ್‌ ಸಿದ್ಧಪಡಿಸಲಾಗಿದ್ದು, ಅದನ್ನು ಸಂಪುಟದ ಮುಂದೆ ಮಂಡಿಸಲು ಸೂಚನೆ.

• ಅಂಬೇಡ್ಕರ್‌ ಭವನ ಕಾಮಗಾರಿಯನ್ನು ರೂ.23.83 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸುವ ಯೋಜನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಲು ಸೂಚನೆ.

• ಸಾಲಿಗ್ರಾಮ ತಾಲೂಕಿನಲ್ಲಿ 50 ಕೋಟಿ ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ. ಇದೇ ರೀತಿ ಪಿರಿಯಾಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ.

• ಮೈಸೂರು ನಗರದಲ್ಲಿ 46 ಕಿಮೀ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದೆ.

• ಐಟಿ ಪಾರ್ಕ್‌ ಸ್ಥಾಪನೆಗೆ ಕೋಚನಹಳ್ಳಿಯಲ್ಲಿ ಜಮೀನು ನೀಡುವ ಕುರಿತು ಕ್ರಮ. ಕೋಚನಹಳ್ಳಿಯಲ್ಲಿ ಕೆಐಎಡಿಬಿಗೆ 404 ಎಕ್ರೆ ಜಮೀನು ಸ್ವಾಧೀನ ಕುರಿತಾಗಿ ಈಗಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

• ಫಿಲ್ಮ್‌ ಸಿಟಿ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು.

• ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ರೂ.13 ಕೋಟಿ ಯೋಜನೆ ಸಿದ್ಧಪಡಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se