ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.
10 ದಿನಗಳ ಒಳಗೆ ಉತ್ತರ ನೀಡುವಂತೆ ನೋಟಿಸ್ ನೀಡಲಾಗಿದೆ. ಹರಿಪ್ರಸಾದ್ ಅವರು ಸಿದ್ದರಾಮಯ್ಯ ಅವರನ್ನು ಬಹಿರಂಗವಾಗಿ ಟೀಕಿಸಿದ್ದ ಹಿನ್ನೆಲೆಯಲ್ಲಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಹ್ಯೂಬ್ಲೋ ವಾಚ್ ಕಟ್ಟಿಕೊಂಡು ಪಂಚೆ ಹುಟ್ಟುಕೊಂಡು ಒಳಗೆ ಖಾಕಿ ಚಡ್ಡಿ ಧರಿಸುವುದು ಸಮಾಜವಾದವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಹೇಳದೆಯೇ ಬಿ.ಕೆ. ಹರಿಪ್ರಸಾದ್ ಇತ್ತೀಚೆಗೆ ಟೀಕಾಪ್ರಹಾರ ನಡೆಸಿದ್ದರು. ನಾನು ಅಧಿಕಾರ ಸಿಕ್ಕಿಲ್ಲ ಎಂದು ಅಡ್ವಾಣಿ ಅವರನ್ನು ಭೇಟಿ ಮಾಡಿ ಅವರ ಮನೆಯಲ್ಲಿ ಉಪಾಹಾರ ಸ್ವೀಕರಿಸಿ ಬಿಜೆಪಿ ಸೇರಲು ಹೋಗಿರಲಿಲ್ಲ. ಯಾರು ಹೋಗಿದ್ದರು ಎಂಬುದಕ್ಕೆ ಸಾಕ್ಷಿಯಾಗಿದ್ದ ವೆಂಕಯ್ಯ ನಾಯ್ಡು ಮತ್ತು ಅರವಿಂದ ಲಿಂಬಾವಳಿ ಈಗಲೂ ಇದ್ದಾರೆ ಎಂದು ಸಿದ್ದರಾಮಯ್ಯನವರ ಹೆಸರು ಹೇಳದೇ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದರು.