ಬೆಂಗಳೂರು: ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಅವರಿಗೆ ಲಕ್ಕಿ ನಂಬರ್ 13 ಎನ್ನುವ ಚರ್ಚೆ ನಡೆದಿದೆ.
2013ರ ಮೇ 13 ರಂದು ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಬಾರಿ 2023ರ ಮೇ 13 ರಂದು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಇದುವರೆಗೆ 13 ಬಾರಿ ಬಜೆಟ್ ಮಂಡಿಸಿದ್ದಾರೆ. ಕಾಂಗ್ರೆಸ್ ಪಕ್ಷ 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಸಿದ್ದರಾಮಯ್ಯಗೆ 13 ಲಕ್ಕಿ ನಂಬರ್ ಎನ್ನುವ ಚರ್ಚೆ ನಡೆದಿದೆ.