
ಬೆಂಗಳೂರು: ಖಾಸಗಿ ಅನುದಾನಿತ ಶಾಲಾ ಕಾಲೇಜುಗಳ ಎಲ್ಲಾ ಸಿಬ್ಬಂದಿಗೆ ಪರಿಹಾರ ಘೋಷಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕೊರೋನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಬಿಡಿಗಾಸಿನ ಪರಿಹಾರ ಘೋಷಿಸಿದೆ. ಇದರಲ್ಲಿ ಅನುದಾನರಹಿತ ಶಾಲೆಗಳ ಶಿಕ್ಷಕರು ಕೂಡ ಸೇರಿದ್ದು, ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನವಾಗಿದ್ದು ಖಾಸಗಿ ಅನುದಾನಿತ ಶಾಲೆಗಳ ಕಾಯಂ ಅಲ್ಲದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಪ್ಯಾಕೇಜ್ ನಿಂದ ಕೈಬಿಡಲಾಗಿದೆ. ಅನುದಾನಿತ ಶಾಲಾ ಕಾಲೇಜುಗಳಲ್ಲಿಯೂ ಕಡಿಮೆ ಸಂಬಳಕ್ಕೆ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸರ್ಕಾರ ನೆರವಾಗಬೇಕು. ಒಂದೂವರೆ ವರ್ಷದಿಂದ ವೇತನವಿಲ್ಲದೆ ಸಂಕಷ್ಟದಲ್ಲಿರುವವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.