alex Certify ಯುವತಿ ಹಕ್ಕು ಚಲಾಯಿಸದಂತೆ ತಡೆಯುತ್ತಿರುವವರು ಯಾರು? ಪೊಲೀಸರಿಗೆ ಪತ್ತೆ ಹಚ್ಚಲಾಗಿಲ್ಲವೆಂದ್ರೆ ನಾಚಿಕೆಗೇಡು: ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿ ಹಕ್ಕು ಚಲಾಯಿಸದಂತೆ ತಡೆಯುತ್ತಿರುವವರು ಯಾರು? ಪೊಲೀಸರಿಗೆ ಪತ್ತೆ ಹಚ್ಚಲಾಗಿಲ್ಲವೆಂದ್ರೆ ನಾಚಿಕೆಗೇಡು: ಸಿದ್ಧರಾಮಯ್ಯ

ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಪೊಲೀಸರಿಗೆ ಪತ್ತೆಹಚ್ಚಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ದೂರಿದ್ದಾರೆ.

ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರ ಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸಲು ತಡೆಯುತ್ತಿರುವವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾರೆ. ವಕೀಲರ ಮೂಲಕ ಪೊಲೀಸರಿಗೆ ದೂರು ಕಲಿಸಿಕೊಡುತ್ತಿದ್ದಾರೆ. ತಂದೆ, ತಾಯಿಗಳ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರಿಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದ್ದಾರೆ.

ಯುವತಿ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲೆ ಪೊಲೀಸರ ಮೇಲೆ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆ ಎನ್ನುವ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹ ಸಚಿವರು ಈ ಬಗ್ಗೆ ಗಮನಹರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲ ಎಂದರೆ ಏನು ಅರ್ಥ? ಆಕೆಯನ್ನು ವಿಜಯಮಲ್ಯನೋ? ನೀರವ್ ಮೋದಿಯೇ? ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...