alex Certify BIG NEWS: ಮೋದಿಯವರು ದೇಶದ ಪ್ರಧಾನಿಯಾಗಿ ಸುಳ್ಳಗಳ ಮಾರುಕಟ್ಟೆ ತೆರೆದಿದ್ದಾರೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೋದಿಯವರು ದೇಶದ ಪ್ರಧಾನಿಯಾಗಿ ಸುಳ್ಳಗಳ ಮಾರುಕಟ್ಟೆ ತೆರೆದಿದ್ದಾರೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕಲಬುರಗಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದೆ. ಮಾಹಿತಿ ಪ್ರಕಾರ ಮೊದಲ ಹಂತದಲ್ಲಿ ಕಾಂಗ್ರೆಸ್ ಪರ ಜನರು ಒಲವು ವ್ಯಕ್ತಪಡಿಸಿದ್ದಾರೆ. 5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ನಂಬಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂಬ ವರದಿ ಬಂದಿದೆ. ಎಲ್ಲಾ ಅಭ್ಯರ್ಥಿಗಳು ಹಾಗೂ ಜಿಲ್ಲಾ ಸಚಿವರೊಂದಿಗೆ ಮಾತನಾಡಿದ್ದೇನೆ. ಎಲ್ಲರೂ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಜನರು ಆಶೀರ್ವಾದ ಮಾಡಿದ್ದಾರೆಂದು ಹೇಳಿದ್ದಾರೆ ಎಂದರು.

ಚುನಾವಣೆಯಲ್ಲಿ ಕೇಂದ್ರ ಸರ್ಕಾರದ 10 ವರ್ಷಗಳ ವೈಫಲ್ಯ ನಮ್ಮ ಸರ್ಕಾರದ ಸಾಧನೆಗಳನ್ನು ಪ್ರಮುಖವಾಗಿ ಪ್ರಸ್ತಾಪ ಮಾಡುತ್ತಿದ್ದೇವೆ. ಜನರು ಆಸಕ್ತಿಯಿಂದ ನಮ್ಮ ಮಾತುಗಳನ್ನು ಆಲಿಸಿ, ಉತ್ಸಾಹವನ್ನು ತೋರುತ್ತಿದ್ದಾರೆ ಎನ್ನುವುದು ಪ್ರಚಾರದಲ್ಲಿ ಎದ್ದು ಕಾಣುತ್ತಿದೆ. ನರೇಂದ್ರ ಮೋದಿಯವರು ದೇಶದ ಪ್ರಧಾನಮಂತ್ರಿಯಾಗಿ ಸುಳ್ಳಗಳ ಮಾರುಕಟ್ಟೆ ತೆರೆದಿದ್ದಾರೆ ಎಂದು ಕಿಡಿಕಾರಿದರು.

ಸಾಮಾಜಿಕ, ಶೈಕ್ಷಣಿಕವಾಗಿ ಹಿಂದಳಿದಿರುವ, ಅವಕಾಶ ವಂಚಿತರಾದವರಿಗೆ ಮೀಸಲಾತಿ ಕೊಡಬೇಕೆಂದು ಸಂವಿಧಾನ ಹೇಳಿದೆ. ಆದರೆ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸಂವಿಧಾನ ತಿದ್ದುಪಡಿ ಮಾಡಿ ಅವರಿಗೂ 10% ಮೀಸಲಾತಿ ನೀಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚನೆ ಮಾಡಿರುವ ಮೂಲ ಸಂವಿಧಾನದಲ್ಲಿ ಹಾಗಿಲ್ಲ. ಆದರೂ ಸಂವಿಧಾನ ತಿದ್ದುಪಡಿ ಮಾಡಿ ಮೀಸಲಾತಿ ನೀಡಿದೆ. 1992 ನೇ ಇಸವಿಯಲ್ಲಿ ಸುಪ್ರೀಂ ಕೋರ್ಟ್ ನ ಸಂವಿಧಾನ ಪೀಠವು ಮಂಡಲ್ ಆಯೋಗದ ವರದಿಯ ಶಿಫಾರಸುಗಳನ್ನು ಒಪ್ಪಿಕೊಂಡಿದ್ದು, ಮೀಸಲಾತಿಯ ಸೀಲಿಂಗ್ ಎಷ್ಟಿರಬೇಕೆಂದು ಕೂಡ ಹೇಳಿದೆ. ಮೀಸಲಾತಿ 50% ಗಿಂತ ಹೆಚ್ಚಿರಬಾರದು ಎಂದು ಹೇಳಿದ್ದಾರೆ. ಸಂವಿಧಾನದಲ್ಲಿಲ್ಲದಿದ್ದರೂ ಸೀಲಿಂಗ್ ನಿಗದಿ ಮಾಡಿದ್ದಾರೆ. ಮಂಡಲ್ ಆಯೋಗದ ವರದಿ ಜಾರಿಯಾಗಿದ್ದು, ಕೇಂದ್ರ ಮತ್ತು ರಾಜ್ಯಗಳಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚನೆಯಾಗಬೇಕೆಂದೂ ಹೇಳಿದೆ. ಮಂಡಲ್ ಆಯೋಗದ ವರದಿ ಜಾರಿಯಾದಾಗ ಮೀಸಲಾತಿ ವಿರೋಧಿಸಿದ್ದು, ಬಿಜೆಪಿಯವರು. ಶಾಲಾ ಕಾಲೇಜುಗಳ ಮಕ್ಕಳನ್ನು ಎತ್ತಿ ಕಟ್ಟಿ ಇದನ್ನು ವಿರೋಧಿಸಲು ಹೇಳಿ ಆತ್ಮಹತ್ಯೆಗೆ ಪ್ರೇರೇಪಿಸಿದರು ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...