ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿರುವ ಅವರು ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮತಯಾಚಿಸಲಿದ್ದಾರೆ.
ಮಂಗಳವಾರ ಮಧ್ಯಾಹ್ನ ಮೂರು ಗಂಟೆಗೆ ಚಿತ್ರದುರ್ಗದಲ್ಲಿ ನಡೆಯುವ ಪ್ರಜಾಧ್ವನಿ -2 ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದು, ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಮತಯಾಚಿಸಲಿದ್ದಾರೆ.
ಸಂಜೆ 6 ಗಂಟೆಗೆ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹೆಚ್.ಎಂ.ಎಸ್. ಲೇಔಟ್ ನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯುವ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಪ್ರಚಾರ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.