ಬೀದರ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವುದರ ಬಗ್ಗೆ ಚರ್ಚೆ ನಡೆದಿದೆ. ಸಿದ್ದರಾಮಯ್ಯ ಅವರಿಗಾಗಿ ಕ್ಷೇತ್ರ ತ್ಯಾಗ ಮಾಡುವುದಾಗಿ ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್ ಘೋಷಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಹೀಂ ಖಾನ್ ಅವರು, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸುವುದಾದರೆ ಬೀದರ್ ಉತ್ತರ ಕ್ಷೇತ್ರ ತ್ಯಾಗ ಮಾಡಲು ಸಿದ್ಧವಾಗಿದ್ದು, ಅವರನ್ನು ಗೆಲ್ಲಿಸುವ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ.
ಬೀದರ್ ಮಾತ್ರವಲ್ಲ, ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸಿದ್ದರಾಮಯ್ಯ ಗೆಲ್ಲುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದಲ್ಲಿದ್ದಾರೆ ಎನ್ನುವ ಮಾತುಗಳು ಸರಿಯಲ್ಲ. ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ.