ಹಾಸನ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಿದ್ಧರಾಮಯ್ಯ ಪಶ್ಚಾತ್ತಾಪಪಟ್ಟಿದ್ದಾರೆ ಎಂದು ರಂಭಾಪುರಿ ಶ್ರೀಗಳು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾನು ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ ಎಂದು ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಧರ್ಮದ ವಿಚಾರದಲ್ಲಿ ಏನಾಯ್ತು ಎಂದು ಅವರಿಗೆ ವಿವರಿಸಿದ್ದೇನೆ. ಆಗ ನಾನು ಏನೇನು ಮಾಡಿದ್ದೇನೆ ಎಂದು ಅವರಿಗೆ ಹೇಳಿದ್ದೇನೆ ಅಷ್ಟೇ. ಇದು ಅಪಪ್ರಚಾರ ಆಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಲಿಂಗಾಯತ ಧರ್ಮದ ಬಗ್ಗೆ ನಾನೇನು ತಲೆ ಕೆಡಿಸಿಕೊಳ್ಳಲು ಹೋಗಿರಲಿಲ್ಲ. ಶಾಮನೂರು ಶಿವಶಂಕರಪ್ಪ ಅವರು ಒಂದು ಅರ್ಜಿ ಕೊಟ್ಟಿದ್ದರು. ವೀರಶೈವ ಧರ್ಮ ಮಾಡಿ ಎಂದು ಅರ್ಜಿ ಕೊಟ್ಟಿದ್ದರು. ಆಗಿನಿಂದ ಇದು ಶುರುವಾಯಿತು ಅಷ್ಟೇ ಎಂದು ಹೇಳಿದ್ದಾರೆ.