ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರಿಗೆ ಪಡಿತರ ಯೋಜನೆಯಡಿ ನೀಡುತ್ತಿರುವ ಅಕ್ಕಿ ಪ್ರಮಾಣವನ್ನು ಹೆಚ್ಚಳ ಮಾಡಬೇಕೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಪಡಿತರ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ ನೀಡುತ್ತಿರುವ ಅಕ್ಕಿಯನ್ನು 5 ಕೆಜಿ ಯಿಂದ 7 ಕೆಜಿಗೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ, ಎಸ್ಎಸ್ಎಲ್ಸಿ ಪೂರ್ವ ವಿದ್ಯಾರ್ಥಿಗಳಿಗೆ 400 ರೂ., ಎಸ್ಎಸ್ಎಲ್ಸಿ ನಂತರದ ವಿದ್ಯಾರ್ಥಿಗಳಿಗೆ 500 ರೂ. ವಿದ್ಯಾರ್ಥಿವೇತನ ಮತ್ತು ಊಟದ ವೆಚ್ಚವನ್ನು ಹೆಚ್ಚಳಮಾಡಿ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.