ಮೈಸೂರು: ರಾಜ್ಯದಲ್ಲಿ ಭೀಕರ ಬರಗಾಲದಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರ ಸಾಲ ಮನ್ನಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂಬ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹಿಂದೆ ಯಡಿಯೂರಪ್ಪ ಸರ್ಕಾರವಿದ್ದಾಗ ರೈತರ ಸಾಲ ಮನ್ನಾ ಮಾಡಿ ಎಂದು ಕೇಳಿದ್ದಕ್ಕೆ ‘ನಮ್ಮ ಬಳಿ ಪ್ರಿಂಟಿಂಗ್ ಮಷಿನ್ ಇದೆಯಾ?’ ಎಂದು ಕೇಳಿದ್ದರು. ಈಗ ಸಾಲ ಮನ್ನಾ ಮಾಡಿ ಎಂದು ಕೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದರು.