
ಕೋಲಾರ: ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು, ಕಾಂಗ್ರೆಸ್ ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಳಬಾಗಿಲಿಂದ ಕಾಂಗ್ರೆಸ್ ಅಧಿಕೃತ ಚುನಾವಣಾ ಪ್ರಚಾರ ಆರಂಭಿಸಿದೆ.
ಈ ಬಾರಿಯ ಚುನಾವಣಾ ಪ್ರಚಾರ ವೈಖರಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸುಳ್ಳುಗಳ ಮೇಲೆ ಪ್ರಚಾರ ಮಾಡುತ್ತಿದೆ. ನಾವು ಸತ್ಯದ ಮೇಲೆ ಪ್ರಚಾರ ಮಾಡುತ್ತೇವೆ. ಕಾಂಗ್ರೆಸ್ ಸತ್ಯವನ್ನೇ ಆಧಾರವಾಗಿಟ್ಟುಕೊಂಡು ಪ್ರಚಾರ ನಡೆಸಲಿದೆ ಎಂದು ಹೇಳಿದರು.