alex Certify BIG NEWS: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ: ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ: ಸಿಎಂ ಸಿದ್ದರಾಮಯ್ಯ

ವಿಜಯನಗರ: ಬೆಂಗಳೂರಿನಲ್ಲಿ ಹಸುಗಳ ಕೆಚ್ಚು ಕೊಯ್ದು ದೌಷ್ಕರ್ಮಿಗಳಿಂದ ಕ್ರೌರ್ಯ ಮೆರೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ. ಈ ಕೃತ್ಯ ಖಂಡನೀಯ. ಹಸುಗಳ ಕೆಚ್ಚಲು ಕೊಯ್ದಿದ್ದು ತಪ್ಪು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರು ಈ ರೀತಿ ಮಾಡಿದ್ದಾರೆ ಎಂದು ಗೊತ್ತಿಲ್ಲ. ಆರೋಪಿಗಳನ್ನು ಪತ್ತೆಹಚ್ಚಲಾಗುತ್ತಿದೆ. ಕಮಿಷ್ನರ್ ಗಮನಕ್ಕೆ ತಂದಿದ್ದೇನೆ. ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದು ಹೇಳಿದರು.

ರಾಜಕೀಯಕ್ಕಾಗಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಬಾರದು. ಯಾರು ಈ ಕೃತ್ಯ ಮಾಡಿದ್ದಾರೆ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...