ವಿಜಯಪುರ: ಮಂಡ್ಯದಲ್ಲಿ ಹನುಮಧ್ವಜ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಂಡ್ಯದ ಪ್ರಕರಣದ ವಾಸ್ತವಾಂಶವೇ ಬಿಜೆಪಿ ರಾಜ್ಯಾಧ್ಯಕ್ಷರಿಗೆ ತಿಳಿದಿಲ್ಲ. ಅಲ್ಲಿ ಕೇವಲ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜ ಹಾರಿಸುವುದಾಗಿ ಕೆರಗೋಡು ಗ್ರಾಮಪಂಚಾಯ್ತಿಯಲ್ಲಿ ಅನುಮತಿ ಪಡೆದುಕೊಂಡು ಕೇಸರಿ ಧ್ವಜ ಹಾರಿಸಲು ಮುಂದಾಗಿದ್ದರು. ಬಿಜೆಪಿಗರಿಗೆ ರಾಷ್ಟ್ರಧ್ವಜದ ಬಗ್ಗೆ ಯಾವುದೇ ಗೌರವವಿಲ್ಲ. ರಾಷ್ಟ್ರಧ್ವಜ, ಭಾರತ ದೇಶದ 140 ಕೋಟಿ ಜನರ ಅಸ್ಮಿತೆಯ ಪ್ರತೀಕ. ಇಂತಹ ರಾಷ್ಟ್ರಧ್ವಜವನ್ನು ಹಾಕಲು ಒಪ್ಪದಿರುವವರು ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ ಎಂದು ಟಾಮ್ಗ್ ನೀಡಿದರು.
ಮಂಡ್ಯದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಕಾಂಗ್ರೆಸ್ ಕಾಶ್ಮೀರದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ನೀಡುವುದಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಕಾಂಗ್ರೆಸ್ ಪಕ್ಷ ರಾಷ್ಟ್ರಧ್ವಜಕ್ಕೆ ಸದಾ ಗೌರವ ನೀಡುತ್ತದೆ. 1935 ರಲ್ಲಿ ದೇಶಕ್ಕೆ ರಾಷ್ಟ್ರಧ್ವಜವನ್ನು ನೀಡಿದವರು ಕಾಂಗ್ರೆಸ್ ಪಕ್ಷ ಎಂದರು.