ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ, ನಾಥ್ ಮಾದರಿ ಆಪರೇಷನ್ ನಡೆಯಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅವರದ್ದು ಭ್ರಮೆ, ಹಗಲುಗನಸು ಕಾಣುತ್ತಿದ್ದಾರೆ ಎಂದು ಹೇಳಿದರು. ಯಾವ ಕಾರಣಕ್ಕೂ ನಮ್ಮ ಕಾಂಗ್ರೆಸ್ ಸರ್ಕಾರ ಪತನವಾಗಲ್ಲ. ಈ ಬಾರಿ ಪಾರ್ಲಿಮೆಟ್ ನಲ್ಲಿಯೇ ಎನ್ ಡಿಎ ಸೋಲಲಿದೆ. ಅಂದ ಮೇಲೆ ಯಾವ ಆಪರೇಷನ್ ಮಾಡಲು ಸಾಧ್ಯ ಎಂದು ಹೇಳಿದರು.
ನಮ್ಮ ಶಾಸಕರು ಯಾರೂ ಮಾರಾಟ ಮಾಡಿಕೊಳ್ಳಲು ತಯಾರಿಲ್ಲ. ಕಳೆದ ಒಂದುವರೆ ವರ್ಷದಿಂದಲೂ ಅವರು ಆಪರೇಷನ್ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಮಹಾರಾಷ್ಟ್ರದಂತೆ ಇಲ್ಲಿ ಮಾಡಲು ಸಾಧ್ಯವೇ ಇಲ್ಲ. ಯಾವ ಕಾರಣಕ್ಕೂ ನಮ್ಮ ಸರ್ಕಾರ ಬೀಳುವುದೂ ಇಲ್ಲ.
ನಮ್ಮ ಶಾಸಕರು ಆಪರೇಷನ್ ಗೆ ಒಳಗಾಗಲ್ಲ. ಮಹಾರಾಷ್ಟ್ರದಲ್ಲಾದಂತೆ ಕರ್ನಾಟಕದಲ್ಲಿ ನಡೆಯಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.