ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 353ರ ಪ್ರಕಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಿಎಂ ಸಿದದ್ರಾಮಯ್ಯ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹರೀಶ್ ಪೂಂಜಾ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ ಸೆಕ್ಷನ್ 353ರ ಪ್ರಕಾರ ಎಫ್ಐಆರ್ ದಾಖಲಿಸಲಾಗಿದೆ. ಇದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ ಎಂದರು.
ಹರೀಶ್ ಪೂಂಜಾ ವಿರುದ್ಧ ಪೊಲೀಸರಿಗೆ ಬೆದರಿಕೆ ಹಕಿದ ಎರಡು ಪ್ರಕರಣ ದಾಖಲಾಗಿದೆ. ಅವರು ಶಾಸಕರು ಎಂದ ಮಾತ್ರಕ್ಕೆ ಪೊಲೀಸರಿಗೆ ಬೆದರಿಕೆ ಹಾಕಬಹುದಾ? ಅವರು ಶಾಸಕರೆಂದು ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯನಾ? ಎಂದು ಪ್ರಶ್ನಿಸಿದರು.