ದಾವಣಗೆರೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಲಾಭಿ ಆರಂಭವಾಗಿದೆ. ಈ ನಡುವೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ವಿಚಾರವಾಗಿ, ಅವರು ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.
ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ. ಸಮೀಕ್ಷೆ ನಡೆಯುತ್ತಿದೆ ಎಂದು ಹೇಳಿದರು.