ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಒತ್ತಾಯಿಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಈಗ ನಡೆಯುತ್ತಿರುವ ತನಿಖೆ ಬಗ್ಗೆ ಮಧ್ಯಪ್ರವೇಶ ಮಾಡಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸುತ್ತಿದೆ. ತನಿಖೆಯಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ. ಪ್ರಕರಣವನ್ನು ಸಿಬಿಐಗೆ ಕೊಡಿ ಎನ್ನಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಹಾಗಂತ ಸಿಬಿಐ ಮೇಲೆ ನನಗೆ ನಂಬಿಕೆ ಇಲ್ಲ ಅಂತ ಹೇಳುತ್ತಿಲ್ಲ. ಆದರೆ ನಮ್ಮ ಎಸ್ಐಟಿ ಬಗ್ಗೆ ನಂಬಿಕೆ ಇರಲಿ. ಈಗಾಗಲೇ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ದೇವರಾಜೇಗೌಡನನ್ನು ಬಂಧಿಸಲಾಗಿದೆ. ಸೂಕ್ತ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಿದರು.