ಮೈಸೂರು: ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಯೋಜನೆಗಳನ್ನು ಈಗಿನ ಸರ್ಕಾರ ನಿಲ್ಲಿಸುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಶಾಸಕರ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಲಾಗಿದೆ. 7 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಅದನ್ನು ಕಡಿತಗೊಳಿಸಲಾಗಿದೆ. ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಂದ ನಂತರ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಈ ಸರ್ಕಾರ ಡಕೋಟ ಸರ್ಕಾರ. ಯಡಿಯೂರಪ್ಪ ಡ್ರೈವಿಂಗ್ ಬಾರದ ಮುಖ್ಯಮಂತ್ರಿಯಾಗಿದ್ದು, ಅವರಿಗೆ ದಕೋಟ ಬಸ್ ಕೊಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಒಂದೂವರೆ ಸಾವಿರ ಕೋಟಿ ರೂಪಾಯಿ ಸಂಗ್ರಹಿಸಿದ ಬಗ್ಗೆ ಲೆಕ್ಕ ಕೊಡಲಿ. ಈ ಹಿಂದೆ ಸಂಗ್ರಹಿಸಿದ್ದ ಹಣದ ಬಗ್ಗೆ ಲೆಕ್ಕ ಕೊಡಲಿ. ರಾಮಮಂದಿರ, ರಾಮನ ಬಗ್ಗೆ ನಮಗೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.