ಬೆಂಗಳೂರು : ಐದು ವರ್ಷ ನಾನೇ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಈ ವಿಚಾರವಾಗಿ ಬಹಿರಂಗವಾಗಿ ಮಾತನಾಡುವುದಿಲ್ಲ. ಪಕ್ಷ ಹೇಳಿದ್ದನ್ನು ಪಾಲಿಸುವುದಷ್ಟೆ ನಮಗೆ ಗೊತ್ತು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಕಚ್ಚಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್ ನಮ್ಮಲ್ಲಿ ಯಾವುದೇ ಜಗಳ ಇಲ್ಲ, ಬಿಜೆಪಿ ಮುಖಂಡರು ತಮ್ಮ ವೈಫಲ್ಯ ಮುಚ್ಚಿಡಲು ಈ ರೀತಿ ಮಾತನಾಡುತ್ತಾರೆ. ನಾವು ಆಪರೇಶನ್ ಕಮಲ ಮಾಡುತ್ತಿಲ್ಲ, ಬೇಕಾದರೆ ಅವರೇ ತನಿಖೆ ಮಾಡಿಸಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಐದು ವರ್ಷಗಳ ಕಾಲ ನಮ್ಮ ಸರ್ಕಾರ ಇರುತ್ತದೆ… ನಾನು ಮುಖ್ಯಮಂತ್ರಿ, ನಾನು ಮುಂದುವರಿಯುತ್ತೇನೆ.ಇನ್ನೂ ಮೂವರು ಉಪಮುಖ್ಯಮಂತ್ರಿಗಳನ್ನು ಹೊಂದುವ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಯಾರು ಹೇಳಿದರು? ಇದೆಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ಪ್ರಾದೇಶಿಕ ಪಕ್ಷವಲ್ಲ, ಅದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಜೊತೆ ಚರ್ಚಿಸದೆ ಏನನ್ನೂ ನಿರ್ಧರಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿಯಾಗಿ ಅಥವಾ ಶಾಸಕನಾಗಿ ನಾನು ಸರ್ಕಾರವನ್ನು ಬದಲಾಯಿಸಲು ಸಾಧ್ಯವಿಲ್ಲ. ನಮಗೆ ಹೈಕಮಾಂಡ್ ಇದೆ. ಅವರು ನಿರ್ಧರಿಸುತ್ತಾರೆ ಎಂದರು.