alex Certify ಬ್ರಿಟೀಷರಿಗೆ ಐಡಿಯಾ ಕೊಟ್ಟು ರಾಯಣ್ಣನ ಬಂಧನಕ್ಕೆ ಕಾರಣರಾದವರು ನಮ್ಮವರೇ: ಅಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ: ಸಿಎಂ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರಿಟೀಷರಿಗೆ ಐಡಿಯಾ ಕೊಟ್ಟು ರಾಯಣ್ಣನ ಬಂಧನಕ್ಕೆ ಕಾರಣರಾದವರು ನಮ್ಮವರೇ: ಅಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ: ಸಿಎಂ ವಾಗ್ದಾಳಿ

ಬೆಳಗಾವಿ: ಜನರ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಟಾಂಗ್ ನೀಡಿದ್ದಾರೆ.

ಬೆಳಗಾವಿಯ ಕೌಜಲಗಿಯಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮವರೇ ರಾಯಣ್ನರನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. ಅಂತಹ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ ಎಂದರು.

ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು.

ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದರು. ಇಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ ಎಂದು ಹೇಳಿದರು.

ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದರು.

ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಬಿಜೆಪಿಯವರು ಭಯಾನಕ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...