
ಬೆದರಿಕೆ ಇಲ್ಲದಿದ್ದರೂ ನನಗೆ ಭದ್ರತೆ ಹೆಚ್ಚಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಯಾವುದೇ ಬೆದರಿಕೆ ಇಲ್ಲದೆ ಇರಬಹುದು. ಆದರೆ, ಕೊತ್ವಾಲ್ ರಾಮಚಂದ್ರ ಶಿಷ್ಯರೂ ರಾಜಕಾರಣದಲ್ಲಿದ್ದಾರೆ. ಅವರಿಂದ ಯಾರಿಗೂ ತೊಂದರೆ ಆಗಬಾರದು ಎಂದು ಸಿದ್ದರಾಮಯ್ಯನವರಿಗೆ ಭದ್ರತೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸಿದ್ಧರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, ಕೊತ್ವಾಲ್ ರಾಮಚಂದ್ರ ಶಿಷ್ಯರು ರಾಜಕಾರಣದಲ್ಲಿದ್ದು, ಅವರಿಂದ ಯಾರಿಗೂ ತೊಂದರೆ ಆಗಬಾರದೆಂದು ಭದ್ರತೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.