alex Certify ಆಡಳಿತ ಪಕ್ಷ ಬಿಜೆಪಿಗೆ ಕಾಂಗ್ರೆಸ್ ಬಿಗ್ ಶಾಕ್: ಕಲಾಪದಲ್ಲಿ ಕಂಟ್ರಾಕ್ಟರ್ ಕಮಿಷನ್, ಬಿಟ್ ಕಾಯಿನ್, ಭ್ರಷ್ಟಾಚಾರ, ಬೆಳೆಹಾನಿ ಪರಿಹಾರದ ಬಗ್ಗೆ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಡಳಿತ ಪಕ್ಷ ಬಿಜೆಪಿಗೆ ಕಾಂಗ್ರೆಸ್ ಬಿಗ್ ಶಾಕ್: ಕಲಾಪದಲ್ಲಿ ಕಂಟ್ರಾಕ್ಟರ್ ಕಮಿಷನ್, ಬಿಟ್ ಕಾಯಿನ್, ಭ್ರಷ್ಟಾಚಾರ, ಬೆಳೆಹಾನಿ ಪರಿಹಾರದ ಬಗ್ಗೆ ಚರ್ಚೆ

ಬಾಗಲಕೋಟೆ: ವಿಧಾನಮಂಡಲ ಅಧಿವೇಶನದ ಕಲಾಪದಲ್ಲಿ ಬಿಟ್ ಕಾಯಿನ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಲಾಗುವುದು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಮಾತನಾಡಿದ ಅವರು, ಬೆಳೆಹಾನಿ, ಭ್ರಷ್ಟಾಚಾರ, ಕೃಷ್ಣಾ, ಮಹದಾಯಿ ವಿಚಾರ, ಗುತ್ತಿಗೆದಾರರ 40 ಪರ್ಸೆಂಟ್ ಕಮಿಷನ್ ಆರೋಪದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ಧರಾಮಯ್ಯ, ಆರ್ಥಿಕತೆ ಸ್ಥಿತಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಮ್ಮ ಕಾಲದಲ್ಲಿ ಆರ್ಥಿಕ ಪರಿಸ್ಥಿತಿ ಹೇಗಿತ್ತು? ನಾವು ಹೀಗೆ ಹೇಳಿದ್ದೇವೆಯೇ, ಕೊರೋನಾಗೆ ಐದಾರು ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಕೇಂದ್ರ ಸರ್ಕಾರವು ಕೊರೋನಾಗೆ ಹಣ ಬಿಡುಗಡೆ ಮಾಡಿದೆ. ಕೊರೋನಾ ಒಂದು ನೆಪವಷ್ಟೇ ಎಂದು ಕಿಡಿಕಾರಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...