
ಬೆಂಗಳೂರು: ರಾಜ್ಯ ವಿಧಾನ ಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಜುಲೈ 15 ರಿಂದ 26 ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ.
10 ದಿನಗಳ ಕಾಲ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ. ಅಧಿವೇಶನದ ದಿನಾಂಕ ನಿಗದಿಪಡಿಸುವುದನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿತ್ತು.
ಕಳೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಮುಖ್ಯಮಂತ್ರಿಗಳು ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದಾರೆ.