ಬೆಂಗಳೂರು : ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ ಬಂಗಲೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಶಿಫ್ಟ್ ಆಗಲಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಖಾಲಿ ಮಾಡಿದ ಬಳಿಕ ಸಣ್ಣಪುಟ್ಟ ದುರಸ್ತಿ ಹಾಗೂ ಸುಣ್ಣ ಬಣ್ಣ ಬಳಿದು ಕಾವೇರಿ ಬಂಗಲೆಯನ್ನು ಸಿಎಂ ವಾಸ್ತವ್ಯಕ್ಕೆ ಸಿದ್ಧಪಡಿಸಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾಗೆ ಹೊಂದಿಕೊಂಡ ಬಂಗಲೆ ಕಾವೇರಿಯನ್ನು ತಮ್ಮ ಅಧಿಕೃತ ನಿವಾಸವಾಗಿ ಸಿದ್ದರಾಮಯ್ಯ ಅವರು ಆಯ್ಕೆ ಮಾಡಿಕೊಂಡಿದ್ದರು. ಇಂದು ಅಧಿಕೃತ ಕಾವೇರಿ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಶಿಫ್ಟ್ ಆಗಲಿದ್ದಾರೆ.