ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದು ಗ್ಯಾರಂಟಿ. ಪಕ್ಷ ಅಧಿಕಾರಕ್ಕೆ ಬಂದರೆ ಮಲೆನಾಡಿನ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಶರಾವತಿ ಸಂತ್ರಸ್ಥರ ಸಮಸ್ಯೆ ಸೇರಿದಂತೆ ಮಲೆನಾಡಿನ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, 2015 ರಲ್ಲಿ ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ನನ್ನ ಗಮನಕ್ಕೆ ತಂದರು. ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸಲೇಬೇಕೆಂದು ಸಮಿತಿ ರಚಿಸಿದೆ. 7,000 ಕುಟುಂಬಕ್ಕೆ 9,000ಕ್ಕೂ ಹೆಚ್ಚು ಎಕರೆ ಜಮೀನು ನೀಡಿದ್ದೆವು ಎಂದರು.
ಕಾಂಗ್ರೆಸ್ ಸರ್ಕಾರವಿದ್ದಾಗ ಸಂತ್ರಸ್ತರಿಗೆ ನೀಡಿದ್ದ ಭೂಮಿ ಡಿ ನೋಟಿಫೈ ಮಾಡಲಾಗಿದೆ. ಅರಣ್ಯ ಭೂಮಿ ಡಿ ನೋಟಿಫೈ ಪ್ರಶ್ನಿಸಿ ಒಬ್ಬ ಕೋರ್ಟಿಗೆ ಹೋಗಿದ್ದ. ಕಾಂಗ್ರೆಸ್ ಸರ್ಕಾರ ಮಾಡಿದ ಡಿ ನೋಟಿಫಿಕೇಶನ್ ಅನ್ನು ರದ್ದು ಮಾಡಿದ್ದು, ಆದರೆ, ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದನ್ನು ಸರಿಪಡಿಸುವ ಕೆಲಸ ಮಾಡಿಲ್ಲ. ಪಕ್ಷ ಅಧಿಕಾರಕ್ಕೆ ಬಂದರೆ ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ನೇತೃತ್ವದ ಸರ್ಕಾರ ಜನರಿಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಆದರೆ, ಬಿಜೆಪಿ ಸರ್ಕಾರ 600 ಭರವಸೆ ನೀಡಿ 25 ಈಡೇರಿಸಿದೆ ಎಂದು ಟೀಕಿಸಿದ್ದಾರೆ.