ದಾವಣಗೆರೆ: ರಾಜ್ಯಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾವಣಗೆರೆಗೆ ಆಗಮಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಕನಕ ಜಯಂತಿ ಹಾಗೂ ಶೋಷಿತರ ಸಮಾವೇಶ ಉದ್ಘಾಟನೆ ನೆರವೇರಿಸಲಿದ್ದಾರೆ. ಯುಜನೋತ್ಸವ, ಕನಕ ಜಯಂತಿ, ಶೋಷಿತರ ಸಮಾವೇಶದಲ್ಲಿ ಭಾಗವಹಿಸಲಿರುವ ಸಿಎಂ ಸಂಜೆ 4 ಗಂಟೆಗೆ ದಾವಣಗೆರೆಯಿಂದ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.
ದಾವಣಗೆರೆಯಲ್ಲಿ ಸಿದ್ದರಾಮಯ್ಯ ಈ ಹಿಂದೆ ಸಿದ್ಧರಾಮೋತ್ಸವ ನಡೆಸಿದ್ದರು. ಇಂದು ದಾವಣಗೆರೆಯಲ್ಲಿ ಕನಕ ಜಯಂತಿ ಮತ್ತು ಶೋಷಿತರ ಸಮಾವೇಶ ನಡೆಸುವ ಮೂಲಕ ಮತ್ತೆ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ.